;
top of page

ಪುತ್ತೂರು : ಕೈಕಾಲು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಸಾಗಾಟ :11 ಗೋವುಗಳ ರಕ್ಷಣೆ, ಓರ್ವ ವಶಕ್ಕೆ

Oct 5
1 min read

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು, 11 ಗೋವುಗಳನ್ನು ರಕ್ಷಿಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಪುತ್ತೂರು ಕುಂಜೂರು ಪಂಜದ ಮಯ್ಯ ಫಾರ್ಮ್ಸ್‌ನಿಂದ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಗೋವುಗಳನ್ನು ಕೈಕಾಲು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.


ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಾಹನವನ್ನು ಪತ್ತೆಹಚ್ಚಿ ಅದರಲ್ಲಿದ್ದ 11 ಗೋವುಗಳನ್ನು ರಕ್ಷಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ಸಂಬಂಧ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page