ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ತಡೆದು ಓರ್ವ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಿಡೆಕಲ್ಲು ಬಳಿ ಮುಂಜಾನೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಪಿಕ್‌ಅಪ್ ವಾಹನವನ್ನು ತಡೆದು, ಮೂರು ಹಸುಗಳು ಹಾಗೂ ಒಂದು ಹೋರಿಯನ್ನು ರಕ್ಷಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಭಜರಂಗದಳದ ಕಾರ್ಯಕರ್ತರು ಜಿಡೆಕಲ್ಲು ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗೋವುಗಳನ್ನು ವಾಹನದಲ್ಲಿ ಕ್ರೂರ ಹಾಗೂ ಅಮಾನುಷ ರೀತಿಯಲ್ಲಿ ಸಾಗಿಸುತ್ತಿದ್ದದ್ದು ಪತ್ತೆಯಾಗಿದೆ ಎನ್ನಲಾಗಿದೆ.

ವಾಹನದಲ್ಲಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ರಕ್ಷಿಸಲಾದ ನಾಲ್ಕು ಗೋವುಗಳು ಹಾಗೂ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಇಬ್ಬರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.







Comments