;
top of page

ಪುತ್ತೂರು: ಕುಮಾರಧಾರ ನದಿ ಪ್ರವಾಹಕ್ಕೆ ಮುಳುಗಿದ ಮಹಾಲಿಂಗೇಶ್ವರ ದೇವರ ಸ್ನಾನದ ಕಟ್ಟೆ

Aug 2
1 min read

ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮವಾಗಿ ವೀರಮಂಗಲದಲ್ಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನದ ಕಟ್ಟೆ ಸಂಪೂರ್ಣ ಜಲಾವೃತಗೊಂಡಿದೆ.

ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ತೀರದ ಪಕ್ಕದಲ್ಲಿರುವ ಕೆಲವು ತೋಟಗಳಿಗೂ ಪ್ರವಾಹದ ನೀರು ನುಗ್ಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೃಷಿಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಮಳೆ ಮುಂದುವರಿದರೆ ನೀರಿನ ಮಟ್ಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ನದಿ ತೀರದ ನಿವಾಸಿಗಳು ಹಾಗೂ ಭಕ್ತರು ಅನಗತ್ಯವಾಗಿ ನದಿಯ ಬಳಿ ತೆರಳದಂತೆ ಸೂಚಿಸಲಾಗಿದೆ. ತಾಲೂಕು ಆಡಳಿತವು ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page