;
top of page

ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ತಳ್ಳಾಟ, ನಿಂದನೆ: ಪ್ರಕರಣ ದಾಖಲು

Sep 3
1 min read

ಪುತ್ತೂರು: ಸ್ಪಷ್ಟನೆ ನೀಡಲು ಪ್ರೆಸ್ ಕ್ಲಬ್‌ಗೆ ಆಗಮಿಸಿದ್ದ ರಾಜಕೀಯ ಪಕ್ಷವೊಂದರ ಕಾರ್ಯಕರ್ತನಿಗೆ ತಳ್ಳಾಡಿ, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ ಘಟನೆ ಸೆ. 1ರಂದು ನಡೆದಿದೆ.

ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ದೂರು ನೀಡಿದವರಾಗಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡಲು ಅವರು ಪತ್ರಿಕಾಗೋಷ್ಠಿಗೆ ಬಂದಿದ್ದಾಗ ಉದಯ ಪಾಟಾಳಿ, ಜುನೈದ್ ಬಿಜಿ, ಇಸಾಕ್ ಸಾಲ್ಮರ, ಬಶೀರ್ ಪರ್ಲಡ್ಕ ಸೇರಿದಂತೆ ಹಲವರು ಸೇರಿ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಅಲ್ಲದೆ ಪ್ರೆಸ್ ಕ್ಲಬ್‌ನಿಂದ ಹೊರಬರದಂತೆ ಅಕ್ರಮವಾಗಿ ತಡೆದಿದ್ದಾರೆ ಎಂದೂ ಆರೋಪಿಸಲಾಗಿದೆ.

ಈ ಕುರಿತು ಅಬ್ದುಲ್ ಹಕೀಂ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page