;
top of page

ಪುತ್ತೂರಿನ ಜೈನ ಭವನದಲ್ಲಿ ನಾಳೆಯಿಂದ ಶೇಟ್ ಎಲೆಕ್ಟ್ರಾನಿಕ್ಸ್ ದೀಪಾವಳಿ ಮಹಾ ಮಾರಾಟ ಮೇಳ

2 hours ago
1 min read


ಪುತ್ತೂರು: ಕಳೆದ 27 ವರ್ಷಗಳಿಂದ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿರುವ ಶೇಟ್ ಎಲೆಕ್ಟ್ರಾನಿಕ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಮಹಾ ಮಾರಾಟ ಮೇಳ ಆಯೋಜಿಸಲಾಗಿದೆ. ನವೆಂಬರ್ 1ರಿಂದ 13ರವರೆಗೆ ಪುತ್ತೂರಿನ ಜೈನ ಭವನದಲ್ಲಿ ಈ ಮೇಳ ನಡೆಯಲಿದೆ.

ಮೇಳದಲ್ಲಿ ವಿವಿಧ ಪ್ರಮುಖ ಕಂಪನಿಗಳ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಹೊಸ ಮಾದರಿಗಳ ವಿಶಾಲ ಶ್ರೇಣಿ, ಆಧುನಿಕ ವಿನ್ಯಾಸದ ಫರ್ನೀಚರ್‌ಗಳ ದೊಡ್ಡ ಸಂಗ್ರಹ ಸೇರಿದಂತೆ ಹಲವು ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯವಾಗಲಿವೆ.

ಮಹಾ ಮಾರಾಟ ಮೇಳದ ಪ್ರಮುಖ ಆಕರ್ಷಣೆಯಾಗಿ ಪ್ರತಿದಿನ ಖಚಿತ ಚಿನ್ನದ ನಾಣ್ಯ ಗೆಲ್ಲುವ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೆ, ಪ್ರತಿಯೊಂದು ಖರೀದಿಯೊಂದಿಗೆ ಐದು ಅಚ್ಚರಿಯ ಉಡುಗೊರೆಗಳನ್ನು ಪಡೆಯುವ ಅವಕಾಶವೂ ಇದೆ.

ಇದರ ಜೊತೆಗೆ ₹2,000ಕ್ಕಿಂತ ಹೆಚ್ಚಿನ ಖರೀದಿಗೆ ಕೂಪನ್ ಪಡೆಯುವ ಮೂಲಕ ಟಿವಿಎಸ್ ಜುಪಿಟರ್ ವಾಹನ ಗೆಲ್ಲುವ ಅವಕಾಶವನ್ನು ಗ್ರಾಹಕರಿಗೆ ನೀಡಲಾಗಿದೆ. ಹಲವು ಪ್ರಮುಖ ಕಂಪನಿಗಳ ಸಹಯೋಗದೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವೂ ಲಭ್ಯವಿರಲಿದೆ.

ಗ್ರಾಹಕರಿಗೆ ಮಾರಾಟದ ಬಳಿಕವೂ ಪರಿಪೂರ್ಣ ಸರ್ವೀಸ್ ಒದಗಿಸುವುದು ಶೇಟ್ ಎಲೆಕ್ಟ್ರಾನಿಕ್ಸ್‌ನ ವಿಶೇಷತೆಯಾಗಿದೆ. ಹಬ್ಬದ ಸಂದರ್ಭದಲ್ಲಿ ಗ್ರಾಹಕರು ಈ ವಿಶೇಷ ಮಹಾ ಮಾರಾಟ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಮಾಲಕರಾದ ರೂಪೇಶ್ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page