;
top of page

ಪುತ್ತೂರು, ವಿಟ್ಲ ಅಭಿವೃದ್ಧಿಗೆ ₹10 ಕೋಟಿ ವಿಶೇಷ ಅನುದಾನ: ಶಾಸಕ ಅಶೋಕ್ ರೈ

Sep 23
1 min read

ಪುತ್ತೂರು: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್‌ಗೆ ಒಟ್ಟು ₹10 ಕೋಟಿ ವಿಶೇಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರನ್ನು ಭೇಟಿಯಾದ ಶಾಸಕರು, ಪುತ್ತೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದರು. ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಹಲವು ಒಳರಸ್ತೆಗಳ ಅಭಿವೃದ್ಧಿ ಹಾಗೂ ಒಳಚರಂಡಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳು ಬಾಕಿ ಉಳಿದಿದ್ದು, ಅನುದಾನದ ಅಗತ್ಯತೆಯನ್ನು ಸರಕಾರದ ಗಮನಕ್ಕೆ ತರಲಾಗಿತ್ತು. ಈ ಮನವಿಗೆ ಸ್ಪಂದಿಸಿದ ಸರಕಾರ, ಪುತ್ತೂರು ನಗರಸಭೆಗೆ ₹6.5 ಕೋಟಿ ಅನುದಾನವನ್ನು ಮಂಜೂರು ಮಾಡಿದೆ.

ಅದೇ ರೀತಿ, ವಿಟ್ಲ ಪಟ್ಟಣ ಪಂಚಾಯತ್‌ಗೆ ₹3.5 ಕೋಟಿ ಅನುದಾನ ಬಿಡುಗಡೆಯಾಗಿದೆ. ವಿಟ್ಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಹೆಚ್ಚುವರಿ ಅನುದಾನ ನೀಡಲಾಗಿದ್ದು, ಮುಂಬರುವ ಜನವರಿ ಅಥವಾ ಫೆಬ್ರವರಿಯೊಳಗೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಜೊತೆಗೆ, ಈ ಅನುದಾನದ ಮೂಲಕ ವಿಟ್ಲ ಪಟ್ಟಣದ ಪ್ರಮುಖ ಹಾಗೂ ಒಳರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ಕ್ಷೇತ್ರದ ಸುದೀರ್ಘ ದಿನಗಳ ಬೇಡಿಕೆಗೆ ಸ್ಪಂದಿಸಿ, ಒಟ್ಟು ₹10 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕ ಅಶೋಕ್ ರೈ ಅವರು ಪುತ್ತೂರು ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page