ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಶಾಸಕ ಅಶೋಕ್ ರೈ ಪಣ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ರಥಬೀದಿ ವಿಸ್ತರಣೆಗಾಗಿ ಉಳ್ಳಾಲ್ತಿ ಕಟ್ಟೆಯ ಬಳಿಯಿರುವ ಖಾಸಗಿ ಜಾಗವನ್ನು ಕಾನೂನುಬದ್ಧವಾಗಿ ವಶಪಡಿಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಮಾಲೀಕರು ಸಹಕರಿಸದಿದ್ದರೆ ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಸರ್ಕಾರದ ಮೂಲಕ ಜಾಗ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ.

ಅಲ್ಲದೆ, ಮಹಾಲಿಂಗೇಶ್ವರ ದೇವರ ತೀರ್ಥಸ್ನಾನ ನಡೆಯುವ ವೀರಮಂಗಲ ಕ್ಷೇತ್ರವನ್ನು ಉತ್ತರ ಭಾರತದ ಪ್ರಯಾಗ್ ರಾಜ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯಿದೆ. ನದಿಯ ಎರಡೂ ಬದಿಯ ಜಾಗವನ್ನು ವಶಕ್ಕೆ ಪಡೆದು ಸುಂದರಗೊಳಿಸುವ ಮೂಲಕ ಪುತ್ತೂರಿನ ಸಮಗ್ರ ಅಭಿವೃದ್ಧಿಗೆ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಶಾಸಕರು ಇದೇ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.







Comments