;
top of page

ರೈಲ್ವೆ ಇಲಾಖೆಯಲ್ಲಿ ಬಂಪರ್ ನೇಮಕಾತಿ: 4,029 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸೆಪ್ಟೆಂಬರ್ 13 ಕೊನೆಯ ದಿನ!

Aug 29
1 min read

ಕೇಂದ್ರ ಸರ್ಕಾರದ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಲಭಿಸಿದೆ. ಭಾರತೀಯ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿಯು (RRB) ಜೂನಿಯರ್ ಎಂಜಿನಿಯರ್ (JE) ಹಾಗೂ ಡಿಪೋಟ್ ಮೆಟೀರಿಯಲ್ ಸೂಪರಿಟೆಂಡೆಂಟ್ (DMS) ಸೇರಿದಂತೆ ಒಟ್ಟು 4,029 ಖಾಲಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇವುಗಳಲ್ಲಿ ಆರ್‌ಆರ್‌ಬಿ ಬೆಂಗಳೂರು ವಲಯವೊಂದರಲ್ಲೇ 299 ಹುದ್ದೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ:

ಅಂಗೀಕೃತ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ 3 ವರ್ಷಗಳ ಎಂಜಿನಿಯರಿಂಗ್ ಡಿಪ್ಲೋಮಾ ಅಥವಾ ಬಿ.ಇ/ಬಿ.ಟೆಕ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳ ವಯಸ್ಸು 18ರಿಂದ 33 ವರ್ಷದೊಳಗಿರಬೇಕು. ನಿಯಮಾನುಸಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಗೆ 3 ವರ್ಷ, ಮಾಜಿ ಯೋಧರು ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿಶೇಷ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ:

ಎಸ್‌ಸಿ, ಎಸ್‌ಟಿ, ಮಹಿಳೆಯರು, ತೃತೀಯಲಿಂಗಿಗಳು ಹಾಗೂ ಮಾಜಿ ಯೋಧ ಅಭ್ಯರ್ಥಿಗಳಿಗೆ 250 ರೂಪಾಯಿ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ:

ಅಭ್ಯರ್ಥಿಗಳನ್ನು ಮೊದಲ ಮತ್ತು ಎರಡನೇ ಹಂತದ ಗಣಕಯಂತ್ರ ಆಧಾರಿತ ಪರೀಕ್ಷೆ (CBT), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನ 35,400 ರೂಪಾಯಿ ಸಿಗಲಿದೆ. ಪರೀಕ್ಷೆಯಲ್ಲಿ ನೆಗೆಟಿವ್ ಅಂಕಗಳಿರುವುದರಿಂದ ಜಾಗರೂಕರಾಗಿ ಉತ್ತರಿಸುವುದು ಅಗತ್ಯ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು ಅಧಿಕೃತ ವೆಬ್‌ಸೈಟ್‌ (rrbapply.gov.in)ಗೆ ಭೇಟಿ ನೀಡಿ, 'Create An Account' ಮೂಲಕ ನೋಂದಾಯಿಸಿಕೊಳ್ಳಬೇಕು. ನಂತರ ಲಾಗಿನ್ ಆಗಿ, ಅಗತ್ಯ ವಿವರಗಳನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು. ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಷನ್‌ ಫಾರ್ಮ್‌ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page