ಕರಾವಳಿಯಲ್ಲಿ ಬಿರುಗಾಳಿ ಎಚ್ಚರಿಕೆ
- May 19
- 1 min read

ಕರ್ನಾಟಕ ಕರಾವಳಿ ಸೇರಿದಂತೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಬಿರುಗಾಳಿ ಮತ್ತು ಅಲೆಗಳ ಅಬ್ಬರ ತೀವ್ರಗೊಳ್ಳಲಿದೆ ಎಂದು ಭಾರತ ಸರ್ಕಾರದ ಗೃಹ ಸಚಿವಾಲಯದ ನಿಯಂತ್ರಣ ಕೊಠಡಿಯು (ICR-ER) ವಿಶೇಷ ಮುನ್ನೆಚ್ಚರಿಕೆ ನೀಡಿದೆ.
ಮೇ 18 ರಿಂದ 21 ರವರೆಗೆ ಕರ್ನಾಟಕ, ಕೇರಳ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ಗಂಟೆಗೆ 40 ರಿಂದ 65 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರವು ಅತ್ಯಂತ ಪ್ರಕ್ಷುಬ್ಧವಾಗಿರಲಿದ್ದು, ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಮತ್ತು ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







Comments