ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ

ಕರ್ನಾಟಕದಾದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಮುಂದಿನ ಮೂರು ದಿನಗಳ ಕಾಲ 'ಯೆಲ್ಲೋ ಅಲರ್ಟ್' ಇರಲಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕಲಬುರಗಿ ಹಾಗೂ ಬೀದರ್ ಸೇರಿದಂತೆ ಹಲವು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ವಿಜಯಪುರ, ಬಾಗಲಕೋಟೆ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮೇ 22 ಮತ್ತು 23 ರಂದು ಕೂಡ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಇದೇ ವೇಳೆ ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಸುಮಾರು 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಎಚ್ಚರಿಸಿದೆ.







Comments