ಮುಂದಿನ 7 ದಿನ ಕರ್ನಾಟಕದಲ್ಲಿ ವರುಣನ ಆರ್ಭಟ: ಕರಾವಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ

ಮುಂಗಾರು ಮಳೆಯ ಅಬ್ಬರದ ನಡುವೆಯೇ ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 30 ರಿಂದ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ವರದಿ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 7 ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಜೂನ್ 27 ರಿಂದ 30 ರವರೆಗೆ ಭಾರಿ ಮಳೆಯೊಂದಿಗೆ ಭೀಕರ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಜುಲೈ 1 ರಿಂದ ಜುಲೈ 3 ರವರೆಗೆ ಮುಂಗಾರು ಆರ್ಭಟ ಮುಂದುವರಿಯಲಿದ್ದು, ಸಾರ್ವಜನಿಕರು, ರೈತರು ಮತ್ತು ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಗುಡುಗಿನ ಸಂದರ್ಭದಲ್ಲಿ ಮರಗಳ ಕೆಳಗೆ ಹಾಗೂ ಹಳೆಯ ಕಟ್ಟಡಗಳ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.







Comments