ರಾಜ್ಯದಲ್ಲಿ ಮಳೆ ಮತ್ತು ಬಿಸಿಗಾಳಿ ಮುನ್ಸೂಚನೆ
- Apr 20
- 1 min read

ರಾಜ್ಯದ ಹವಾಮಾನದಲ್ಲಿ ಏರುಪೇರು ಕಂಡುಬಂದಿದ್ದು, ಏಪ್ರಿಲ್ 21ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವು ಕಡೆ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆಯ ಮುನ್ಸೂಚನೆಯ ನಡುವೆಯೂ ರಾಜ್ಯದ ಹಲವೆಡೆ ತಾಪಮಾನ ಏರಿಕೆಯಾಗಲಿದೆ.

ವಿಶೇಷವಾಗಿ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ತೀವ್ರ ಬಿಸಿಗಾಳಿ ಇರಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಲಿದ್ದು, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಜನತೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.







Comments