ದೇಶದಲ್ಲಿ ಇಂಧನ ಕೊರತೆಯ ಆತಂಕ ಬೇಡ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ

ದೇಶದಲ್ಲಿ ಸದ್ಯಕ್ಕೆ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ ಉತ್ತಮವಾಗಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಚಿವರ ಸಮಿತಿ ಸಭೆಯಲ್ಲಿ ಈ ಮಾಹಿತಿ ನೀಡಲಾಗಿದ್ದು, ಜನರು ಆತಂಕದಿಂದ ಹೆಚ್ಚುವರಿ ಇಂಧನ ಸಂಗ್ರಹಿಸುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.
ಭಾರತವು ವಾರ್ಷಿಕ 258.1 ಮೆಟ್ರಿಕ್ ಟನ್ ತೈಲ ಶುದ್ಧೀಕರಣ ಸಾಮರ್ಥ್ಯ ಹೊಂದಿದ್ದು, ಬಳಕೆಗಿಂತ ಹೆಚ್ಚಿನ ಉತ್ಪಾದನೆ ಇರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ.
ಜಾಗತಿಕ ತೈಲ ಬೆಲೆ ಏರಿಕೆಯ ಭಾರ ಗ್ರಾಹಕರ ಮೇಲೆ ಬೀಳದಂತೆ ತೈಲ ಕಂಪನಿಗಳು ದಿನಕ್ಕೆ 550 ಕೋಟಿ ರೂ. ನಷ್ಟ ಭರಿಸುತ್ತಿವೆ. ಆದರೆ, ವಾಣಿಜ್ಯ ಬಳಕೆಯ ಡೀಸೆಲ್ ದುರುಪಯೋಗ ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.







Comments