ಬಾಲಕಿ ಮೇಲಿನ ಲೈಂಗಿಕ ಕಿರುಕುಳ: ಇಬ್ಬರು ಬಾಲಕರ ವಿರುದ್ಧ ಕೇಸ್
- Jun 25
- 1 min read

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ 16 ವರ್ಷದ ಓರ್ವ ಬಾಲಕನನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.
ಮತ್ತೊಬ್ಬ 17 ವರ್ಷದ ಆರೋಪಿ ಬಾಲಕ ಸದ್ಯ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬಾಲಕರಿಬ್ಬರು ಸೇರಿ 2023ರಲ್ಲಿ ಸಂತ್ರಸ್ತೆಯನ್ನು ಸ್ಥಳೀಯ ಡ್ಯಾಂ ಒಂದರ ಬಳಿಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದರು ಮತ್ತು ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ಬೆದರಿಕೆ ಒಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376, 506 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.







Comments