;
top of page

ರಾಜ್ಯ ರಾಜಕೀಯದಲ್ಲಿ ಸಂಚಲನ: 'ಸಿದ್ದರಾಮಯ್ಯ ಬಿಡುವವರೆಗೂ ಸಿಎಂ ಕುರ್ಚಿ ಸಿಗಲ್ಲ' - ಕೋಡಿಶ್ರೀ ಭವಿಷ್ಯ

  • Writer: sathyapathanewsplu
    sathyapathanewsplu
  • Dec 28, 2025
  • 1 min read

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದ ಕುರಿತು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಗಳು, "ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ, ಅದು ಅಸಾಧ್ಯವಾದ ಕಷ್ಟದ ಕೆಲಸ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ವತಃ ಮನಸ್ಸು ಮಾಡಿ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರವೇ ಬೇರೆಯವರಿಗೆ ಅವಕಾಶ ಸಿಗಲು ಸಾಧ್ಯ," ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಅಥವಾ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನದ ಹಸ್ತಾಂತರದ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಿರ್ಧಾರವೇ ಅಂತಿಮ ಎಂದು ಪರೋಕ್ಷವಾಗಿ ಭವಿಷ್ಯ ನುಡಿದಿದ್ದಾರೆ.

ಕೋಡಿಶ್ರೀಗಳ ಈ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಒಂದು ಕಡೆ ಸಿದ್ದರಾಮಯ್ಯ ಬಣ ಅಧಿಕಾರ ಉಳಿಸಿಕೊಳ್ಳುವ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಹೈಕಮಾಂಡ್ ಹಂತದಲ್ಲಿ ಕುರ್ಚಿ ಕದನ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಶ್ರೀಗಳ ಈ ನುಡಿಗಳು ಸಿದ್ದರಾಮಯ್ಯನವರ ಅಧಿಕಾರಾವಧಿ ಮತ್ತಷ್ಟು ಭದ್ರವಾಗಿದೆಯೇ ಅಥವಾ ಅಧಿಕಾರ ಹಸ್ತಾಂತರದ ಕನಸು ಕಾಣುತ್ತಿರುವವರಿಗೆ ನಿರಾಸೆ ತರಲಿದೆಯೇ ಎಂಬ ಚರ್ಚೆ ಶುರುವಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page