ದುಬಾರಿಯಾಗಲಿದೆ ಹೋಟೆಲ್ ಊಟ-ತಿಂಡಿ!
- May 5
- 1 min read

ಬೆಂಗಳೂರಿನಲ್ಲಿ ಹೋಟೆಲ್ ಊಟ ಮತ್ತು ತಿಂಡಿ ದರಗಳು ಮತ್ತೆ ಏರಿಕೆಯಾಗಲಿವೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ.ಗಳ ಭಾರಿ ಹೆಚ್ಚಳವಾಗಿದ್ದು, ಪ್ರತಿ ಸಿಲಿಂಡರ್ ದರ 3,154 ರೂ.ಗಳಿಗೆ ತಲುಪಿದೆ.
ಈ ದುಬಾರಿ ಇಂಧನ ಬೆಲೆಯಿಂದ ಕಂಗಾಲಾಗಿರುವ ಹೋಟೆಲ್ ಮಾಲೀಕರು, ಅನಿವಾರ್ಯವಾಗಿ ತಿಂಡಿ, ಊಟ ಮತ್ತು ಕಾಫಿ-ಟೀಯ ಬೆಲೆಯನ್ನು ಶೇ. 20ರಷ್ಟು ಹೆಚ್ಚಿಸಲು ನಿರ್ಧರಿಸಿದ್ದಾರೆ. ಇದರಿಂದ ಸಾಮಾನ್ಯ ಗ್ರಾಹಕರಿಗೆ ಆರ್ಥಿಕ ಹೊರೆಯಾಗುವುದು ಖಚಿತವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್, ಬೆಲೆ ಏರಿಕೆ ಮಾಡುವ ನಿರ್ಧಾರವು ಆಯಾ ಹೋಟೆಲ್ ಮಾಲೀಕರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ.







Comments