;
top of page

ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿ ತನಿಖೆ ತೀವ್ರ, ಜಾಲ ಪತ್ತೆ

Sep 2
1 min read

ಬೆಂಗಳೂರು: ಸುಮಾರು 400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ, ಪ್ರತಿ ಹುದ್ದೆಗೆ 40 ಲಕ್ಷ ರೂ.ವರೆಗೆ ಲಂಚ ಪಡೆಯುತ್ತಿದ್ದ ಬೃಹತ್ ಜಾಲವನ್ನು ಪತ್ತೆಹಚ್ಚಿದೆ. ಆರು ಅಭ್ಯರ್ಥಿಗಳು ಹಣ ನೀಡಿ ಪರೀಕ್ಷೆಗೆ ಹಾಜರಾಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಭ್ಯರ್ಥಿಗಳಿಗೆ ಬೆಂಗಳೂರಿನ ರೆಸಾರ್ಟ್‌ಗಳು, ತುಮಕೂರು ಹಾಗೂ ಆಂಧ್ರಪ್ರದೇಶದ ರಹಸ್ಯ ಕೇಂದ್ರಗಳಲ್ಲಿ ಪರೀಕ್ಷೆಗೆ ಮುನ್ನವೇ ಪ್ರಶ್ನೆಪತ್ರಿಕೆ ನೀಡಿ ತರಬೇತಿ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

​ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾದ ಪ್ರಮುಖ ಮಧ್ಯವರ್ತಿ, ಭಾಲ್ಕಿಯ ಬಸವರಾಜ್ ಕನ್ನಾಳೆ ಅವರ ಮನೆ ಮೇಲೆ ದಾಳಿ ನಡೆಸಿದ ಸಿಐಡಿ, ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದೆ. ಈ ಹಗರಣದಲ್ಲಿ ಬಂಧಿತರಾಗಿರುವ ಕೆಪಿಎಸ್‌ಸಿ ಮಾಜಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಕನ್ನಾಳೆ ಅವರನ್ನು 10 ದಿನಗಳ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page