;
top of page

ರೀಲ್ಸ್ ನಲ್ಲಿ ವೈರಲ್ ಆದ ಲಾರಿ ಕ್ಲೀನರ್ ಅರುಣ್ ಕುತೂಹಲಕಾರಿ ಕಥೆ!

  • Feb 4
  • 1 min read

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್ ಹಾಗೂ ಯೂಟ್ಯೂಬ್‌ನಲ್ಲಿ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಯುವಕನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಈ ಸ್ಮೈಲಿಂಗ್ ಸ್ಟಾರ್ ಬೇರೆ ಯಾರೂ ಅಲ್ಲ, ತೆಲಂಗಾಣದ ಹಳ್ಳಿಯೊಂದರ ಅರುಣ್ ಎಂಬ ಸಾಮಾನ್ಯ ಯುವಕ.


ಲಾರಿ ಕ್ಲೀನರ್ ಆಗಿ ಕೆಲಸ ಮಾಡುವ ಅರುಣ್, ತನ್ನ ಸಹೋದ್ಯೋಗಿ ನೆಹರು ಹೇಳಿದ ಜೋಕ್ ಕೇಳಿ ನಕ್ಕ ಕ್ಷಣವನ್ನು ವಿಡಿಯೋ ಮಾಡಿ ಹಂಚಿಕೊಳ್ಳಲಾಗಿತ್ತು. ಕೇವಲ ಒಂದೂವರೆ ತಿಂಗಳಲ್ಲೇ ಈ ವಿಡಿಯೋ 40 ಮಿಲಿಯನ್ ವೀಕ್ಷಣೆ ಪಡೆದಿದೆ.


ಬಡತನದ ಕಾರಣ ನಾಲ್ಕನೇ ತರಗತಿಗೆ ಶಾಲೆ ಬಿಟ್ಟಿದ್ದ ಅರುಣ್, ಈಗ ನೆಹರು ಪ್ರೋತ್ಸಾಹದಿಂದ ಹತ್ತನೇ ತರಗತಿ ಪಾಸಾಗಿದ್ದಾನೆ. ಜೀವನದ ಕಷ್ಟಗಳ ನಡುವೆಯೂ ಮುಗ್ಧ ನಗುವಿನ ಮೂಲಕ ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿರುವ ಅರುಣ್, ಇಂದು ಇಂಟರ್ನೆಟ್ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದಾನೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page