ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ‘ಋತುತಾರೆ’ ಯೋಜನೆ: ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್

ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಆರೋಗ್ಯ ಜಾಗೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದರು.

ಸಚಿವ ಯು.ಟಿ. ಖಾದರ್ ಮಾತನಾಡಿ, ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಕುರಿತು ಸಮಗ್ರವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘ಋತುತಾರೆ’ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಗೆ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಮಹಿಳೆಯರ ಆರೋಗ್ಯ, ಮಾನಸಿಕ ಒತ್ತಡ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧ್ಯಯನ ನಡೆಸಿ ಅಗತ್ಯ ಸಲಹೆಗಳನ್ನು ಸರ್ಕಾರಕ್ಕೆ ನೀಡಲಿದೆ ಎಂದರು.
ಯೋಜನೆ ರೂಪಿಸುವ ಪ್ರಕ್ರಿಯೆಯಲ್ಲಿ ವೈದ್ಯಕೀಯ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ಮಹಿಳೆಯರ ಆರೋಗ್ಯ ರಕ್ಷಣೆ, ಅರಿವು ಮೂಡಿಸುವ ಕಾರ್ಯಕ್ರಮಗಳು ಮತ್ತು ಅಗತ್ಯ ಕ್ರಮಗಳನ್ನು ಈ ಸಮಿತಿ ರೂಪಿಸಲಿದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ನಟಿ ರಮ್ಯಾ ಅವರನ್ನು ‘ಋತುತಾರೆ’ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ಘೋಷಿಸಲಾಯಿತು. ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ರಮ್ಯಾ ತಿಳಿಸಿದರು.







Comments