ಬರ ಪರಿಹಾರ ನೀಡಿಲ್ಲ: ರಿಯಲ್ ಎಸ್ಟೇಟ್‌ನಲ್ಲೇ ಮುಳುಗಿದೆ ಸರ್ಕಾರ - ಬಿ.ವೈ. ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರದಿಂದ ತತ್ತರಿಸಿರುವ ರೈತರ ನೆರವಿಗೆ ಬಾರದೆ, ಕೇವಲ ರಿಯಲ್ ಎಸ್ಟೇಟ್ ಮತ್ತು ಟೌನ್‌ಶಿಪ್ ನಿರ್ಮಾಣದಲ್ಲೇ ಮುಳುಗಿದೆ. ಸರ್ಕಾರ ದಿವಾಳಿಯಾಗಿದ್ದು, ಆರ್ಥಿಕ ತುರ್ತು ಪರಿಸ್ಥಿತಿ ಎದುರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರುಕಾಲು ವರ್ಷಗಳಾದರೂ ನುಡಿದಂತೆ ನಡೆಯದೆ ಕೇವಲ ಜಾಹೀರಾತು ಪ್ರಚಾರದಲ್ಲಷ್ಟೇ ತೊಡಗಿದೆ. ಒಂದೇ ಒಂದು ಹೊಸ ಯೋಜನೆ ಜಾರಿ ಮಾಡಿಲ್ಲ. ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಹಾಗೂ ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದು ದೂರಿದರು.
ರೈತರಿಗೆ ಸೂಕ್ತ ಪರಿಹಾರ ಸಿಗದೆ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಪ್ರತಿ ಹೆಕ್ಟೇರ್‌ಗೆ ₹50,000 ಪರಿಹಾರ ನೀಡಬೇಕು ಮತ್ತು ₹5 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರೂ ಸರ್ಕಾರ ಸ್ಪಂದಿಸಿಲ್ಲ. ದಿನಕ್ಕೆ 8 ಗಂಟೆ ತ್ರಿ-ಫೇಸ್ ವಿದ್ಯುತ್ ನೀಡಲು ಸರ್ಕಾರ ವಿಫಲವಾಗಿದೆ. ಸಿಎಂ ಅವರಿಗೆ ರಿಯಲ್ ಎಸ್ಟೇಟ್ ಮೇಲಿರುವ ಕಾಳಜಿ ಅನ್ನದಾತರ ಮೇಲಿಲ್ಲ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.







Comments