ರಸ್ತೆ ಅಪಘಾತ: ಬೆಳ್ಳಾರೆ ಮೂಲದ ಸಾಫ್ಟ್‌ವೇರ್ ಉದ್ಯೋಗಿ ಸೂರಜ್ ರೈ ನಿಧನ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮೂಲದ ಸೂರಜ್ ರೈ (27) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಮೇ 22ರಂದು ನಿಧನರಾಗಿದ್ದಾರೆ. ಇವರು ಪ್ರಸಿದ್ಧ ಯಕ್ಷಗುರು ವಾಸುದೇವ ರೈ ಅವರ ಪುತ್ರರಾಗಿದ್ದರು.
ಮೇ 15ರಂದು ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಕುಣಿಗಲ್ ಬಳಿ ಕೋಳಿ ಸಾಗಾಟದ ವಾಹನಕ್ಕೆ ಡಿಕ್ಕಿಯಾಗಿ ಸೂರಜ್ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಬೆಳ್ಳಾರೆಯ ನಿವಾಸಕ್ಕೆ ತರಲಾಗುತ್ತಿದ್ದು, ನಂತರ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇವರ ಅಕಾಲಿಕ ನಿಧನಕ್ಕೆ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.







Comments