ಆರ್‌ಟಿಇ ಶಿಕ್ಷಣ 10ನೇ ತರಗತಿವರೆಗೆ ವಿಸ್ತರಿಸಿದ್ದ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್ ತಡೆ
- Jun 11
- 1 min read

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಆರ್‌ಟಿಇ ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು 10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ್ದ ಈ ಸುತ್ತೋಲೆಯನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠವು ಈ ಆದೇಶ ನೀಡಿದೆ.
ಆರ್‌ಟಿಇ ಕಾಯ್ದೆಯಡಿ 6ರಿಂದ 14 ವರ್ಷದೊಳಗಿನವರಿಗೆ ಮಾತ್ರ ಉಚಿತ ಶಿಕ್ಷಣಕ್ಕೆ ಅವಕಾಶವಿದೆ. ನಿರ್ದಿಷ್ಟ ವರ್ಗಕ್ಕೆ ಮಾತ್ರ ವಿಸ್ತರಿಸುವುದು ಕಾನೂನು ಬಾಹಿರ ಮತ್ತು ಸಮಾನತೆಯ ಹಕ್ಕಿನ ಉಲ್ಲಂಘನೆ ಎಂದು ಆಡಳಿತ ಮಂಡಳಿಗಳು ನ್ಯಾಯಾಲಯದಲ್ಲಿ ವಾದಿಸಿದ್ದವು.







Comments