ಸಮವಸ್ತ್ರದ ಘನತೆ ಮರೆತ ಉನ್ನತ ಪೊಲೀಸ್ ಅಧಿಕಾರಿ: ಕಚೇರಿಯಲ್ಲೇ 'ಕಾಮಕಾಂಡ', ಸರ್ಕಾರಕ್ಕೆ ಭಾರೀ ಮುಜುಗರ
- sathyapathanewsplu
- 3 days ago
- 1 min read

ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋಗಳು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿವೆ. ಡಿಜಿಪಿ ಶ್ರೇಣಿಯ ಐಜಿಪಿ ಅಧಿಕಾರಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿರುವಾಗಲೇ ಮಹಿಳೆಯರೊಂದಿಗೆ ಸರಸವಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಇವರು ಅಸಭ್ಯವಾಗಿ ವರ್ತಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದು, ಸರಣಿ ವಿಡಿಯೋಗಳು ಹೊರಬರುತ್ತಿರುವುದು ಇಡೀ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ.
ಈ ಕೃತ್ಯವು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರದ ವಿರುದ್ಧವೂ ಟೀಕೆಗಳು ವ್ಯಕ್ತವಾಗುತ್ತಿವೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಕಚೇರಿಯಲ್ಲೇ ಇಂತಹ ಲೀಲೆಗಳನ್ನು ನಡೆಸಿರುವುದು ಅಕ್ಷಮ್ಯ ಎಂದು ಜನರು ಕಿಡಿಕಾರುತ್ತಿದ್ದಾರೆ. ಸಮವಸ್ತ್ರಕ್ಕೆ ಗೌರವ ನೀಡದೆ ನಡೆಸಿದ ಈ 'ಕಾಮಕಾಂಡ' ಈಗ ಇಡೀ ರಾಜ್ಯ ಸರ್ಕಾರವನ್ನೇ ಮುಜುಗರದ ಸುಳಿಗೆ ಸಿಲುಕಿಸಿದೆ.
ಘಟನೆಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿ ರಾಮಚಂದ್ರ ರಾವ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಮುಖ್ಯಮಂತ್ರಿಗಳ ಅಂಗಳ ತಲುಪುತ್ತಿದ್ದಂತೆ ಕೆಂಡಾಮಂಡಲವಾಗಿರುವ ಸಿಎಂ, ಕೂಡಲೇ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ದಟ್ಟವಾಗಿದೆ.





Comments