;
top of page

ಇಬ್ಬರು ಯುವಕರ ಜೊತೆ ಲಾಡ್ಜ್‌ಗೆ ತೆರಳಿದ್ದ 23ರ ಯುವತಿ ಶವವಾಗಿ ಪತ್ತೆ; ಇಬ್ಬರು ನಾಪತ್ತೆ

2 days ago
1 min read

ಸಕಲೇಶಪುರ: ಇಬ್ಬರು ಯುವಕರೊಂದಿಗೆ ಲಾಡ್ಜ್‌ಗೆ ತೆರಳಿದ್ದ 23 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ಲಾಡ್ಜ್‌ನ ಸ್ನಾನಗೃಹದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಆಕೆಯೊಂದಿಗೆ ಕೊಠಡಿಯಲ್ಲಿ ಇದ್ದ ಇಬ್ಬರು ಯುವಕರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೃತ ಯುವತಿಯನ್ನು ಬೆಂಗಳೂರಿನ ಚಿಕ್ಕಬಾಣಾವರ ಮೂಲದ ವರ್ಷ (23) ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಇಬ್ಬರು ಯುವಕರೊಂದಿಗೆ ಸಕಲೇಶಪುರಕ್ಕೆ ಬಂದಿದ್ದ ವರ್ಷ, ವಳಲಹಳ್ಳಿ ಕೂಡಿಗೆಯ ಶ್ರೀದೇವಿ ಲಾಡ್ಜ್‌ನಲ್ಲಿ ಅವರೊಂದಿಗೆ ಕೊಠಡಿ ಪಡೆದಿದ್ದರು ಎನ್ನಲಾಗಿದೆ.

ಬೆಳಗ್ಗೆ ಲಾಡ್ಜ್‌ನ ಬಾತ್‌ರೂಂನಲ್ಲಿ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಕೆಯೊಂದಿಗೆ ಲಾಡ್ಜ್‌ನಲ್ಲಿ ಇದ್ದ ಇಬ್ಬರು ಯುವಕರು ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವತಿಯ ಸಾವು ಹೇಗೆ ಸಂಭವಿಸಿದೆ ಎಂಬುದು ಸದ್ಯ ನಿಗೂಢವಾಗಿದ್ದು, ಆಕೆಯೊಂದಿಗೆ ಬಂದಿದ್ದ ಇಬ್ಬರು ಯುವಕರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಲತೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾಗಿರುವ ಇಬ್ಬರು ಯುವಕರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯ ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕ ಸಾವಿನ ಕಾರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page