;
top of page

ಸವಣೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಡಿಕ್ಕಿ ಹೊಡೆದ ಬೈಕ್ – ಯುವಕ ಸಾವು, ಮತ್ತೋರ್ವ ಗಂಭೀರ ಗಾಯ

  • May 5
  • 1 min read

ಸವಣೂರಿನ ಕಾಣಿಯೂರು–ಮಂಜೇಶ್ವರ ಅಂತಾರಾಜ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ.

ಸವಣೂರಿನಿಂದ ಸ್ವಲ್ಪ ಮುಂದಿನ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಯಿಂದ ದ್ವಿಚಕ್ರ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.



ಮೃತ ಯುವಕ ಮಿತ್ತೂರು ಮೂಲದವನು ಎಂದು ಹೇಳಲಾಗುತ್ತಿದ್ದು, ಬೈಕ್‌ನಲ್ಲಿ ಇದ್ದ ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page