ಸೆ.21ರಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ?

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಕುಡಿಯುವ ನೀರು ಮತ್ತು ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ.
ಈ ಕಲಾಪದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆ, ತೋಟಗಾರಿಕೆ ಫಾರ್ಮ್‌ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.







Comments