ಶಾಲಾ ಮಕ್ಕಳಿಗೆ ಶೂ ಬದಲು ಪಾದರಕ್ಷೆ? ಶಿಕ್ಷಣ ಇಲಾಖೆಯಿಂದ ಮಹತ್ವದ ಬದಲಾವಣೆ ಸಾಧ್ಯತೆ
- sathyapathanewsplu
- 2 days ago
- 1 min read

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಹಾಗೂ ಸಾಕ್ಸ್ ವಿತರಣಾ ಯೋಜನೆಯಲ್ಲಿ ಈ ಬಾರಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲವು ಜಿಲ್ಲೆಗಳಲ್ಲಿ ಶೂಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್‌ಗಳನ್ನು ನೀಡಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ.
ಮಳೆಗಾಲದಲ್ಲಿ ಶೂ ಮತ್ತು ಸಾಕ್ಸ್‌ಗಳು ಒದ್ದೆಯಾಗಿ ಒಣಗಲು ವಿಳಂಬವಾಗುವುದರಿಂದ ಕೆಟ್ಟ ವಾಸನೆ ಹಾಗೂ ಚರ್ಮದ ಸೋಂಕುಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೆ, ಬೇಸಿಗೆಯಲ್ಲಿ ದೀರ್ಘಕಾಲ ಶೂ ಧರಿಸುವುದರಿಂದ ಪಾದಗಳಲ್ಲಿ ಬೆವರು ನಿಂತು ಮಕ್ಕಳಿಗೆ ಅಸ್ವಸ್ಥತೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಆಯಾ ಭಾಗದ ಹವಾಮಾನಕ್ಕೆ ತಕ್ಕಂತೆ ಹೆಚ್ಚು ಆರಾಮದಾಯಕವಾದ ಪಾದರಕ್ಷೆಗಳನ್ನು ವಿತರಿಸಲು ಇಲಾಖೆ ಯೋಜಿಸುತ್ತಿದೆ. ಇದು ಮಕ್ಕಳ ಆರೋಗ್ಯ ರಕ್ಷಣೆಯ ಜೊತೆಗೆ ಮಳೆಗಾಲದ ಕೆಸರಿನಲ್ಲಿ ಓಡಾಡಲು ಸಹಕಾರಿಯಾಗಲಿದೆ ಎಂದು ಅಂದಾಜಿಸಲಾಗಿದೆ.





Comments