ಶೇಣಿಯಲ್ಲಿ ವಿಜೃಂಭಣೆಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು

ಶೇಣಿ: ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿ (ರಿ.) ಶೇಣಿ ಇದರ ವತಿಯಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಸೆ. 6ರಂದು ಶೇಣಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ರಾಮ ದೇವಾಲಯ, ಚೊಕ್ಕಾಡಿ ಇದರ ಅರ್ಚಕರಾದ ಶ್ರೀ ರಘುರಾಮ ಭಟ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಮಿತಿಯ ಅಧ್ಯಕ್ಷ ಶ್ರೀ ಶಿವಸುಬ್ರಹ್ಮಣ್ಯ ನಾಟಿಕೇರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ ವಿ., ದಕ್ಷಿಣ ಕನ್ನಡ ಜೇನು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಜನಾರ್ಧನ ಚೂಂತಾರು ಹಾಗೂ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ ಉಪಸ್ಥಿತರಿದ್ದರು.
ದೀಕ್ಷಿತ್ ಪೋನಡ್ಕ ಸ್ವಾಗತಿಸಿದರು. ವಿವೇಕ್ ರೈ ಶೇಣಿ ವಂದಿಸಿದರು. ಸೃಜನ್ ಶೇಣಿ ಕಾರ್ಯಕ್ರಮ ನಿರೂಪಿಸಿದರು.
ಜನರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಶೇಷವಾಗಿ ಪುರುಷರು ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಗಮನ ಸೆಳೆಯಿತು. ಸಾರ್ವಜನಿಕರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಿವಸುಬ್ರಹ್ಮಣ್ಯ ನಾಟಿಕೇರಿ ವಹಿಸಿದ್ದರು. ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಬ್ರಹ್ಮ ಬೈದರ್ಕಳ ಗರಡಿ ಶೇಣಿ ಮೊಕ್ತೇಸರ ಬಿ.ಕೆ. ಧರ್ಮಪಾಲ ಶೇಣಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ್ ಪಾಡಾಜೆ, ಜಲಧಿ ಗ್ರೂಪ್ಸ್ ಮಾಲಕ ರಕ್ಷಿತ್ ಪೆರುವಾಜೆ ಹಾಗೂ ಸಮಿತಿಯ ಸ್ಥಾಪಕಾಧ್ಯಕ್ಷ ಧರ್ಮಪಾಲ ಪೂಜಾರಿ ಶೇಣಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಬೆಳಗಿನ ಸಿಹಿತಿಂಡಿಯನ್ನು ಶ್ರೀ ಸಿದ್ಧಿವಿನಾಯಕ ಭಟ್ ಚೂಂತಾರು ಅವರು ನೀಡಿದರು.







Comments