ಶ್ರೀಕೃಷ್ಣ ಜನ್ಮಾಷ್ಟಮಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 3 ದಿನ ಮದ್ಯ ಮಾರಾಟ ನಿಷೇಧ

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರುಕುಡಿಕೆ ಉತ್ಸವದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 6 ರವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶಿಸಿದ್ದಾರೆ.
ಉತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಮೆರವಣಿಗೆಗಳು ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಅಪಾರ ಸಂಖ್ಯೆಯ ಭಕ್ತಾದಿಗಳು ಭಾಗವಹಿಸಲಿದ್ದಾರೆ. ಈ ವೇಳೆ ಕಿಡಿಗೇಡಿಗಳು ಮದ್ಯ ಸೇವಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದನ್ನು ತಡೆಯಲು ಮತ್ತು ಶಾಂತಿ ಪಾಲನೆಯ ಹಿತದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈನ್ ಶಾಪ್, ಬಾರ್ ಮತ್ತು ಮದ್ಯದಂಗಡಿಗಳನ್ನು ಬಂದ್ ಮಾಡಲು ಸೂಕ್ತ ಸೂಚನೆ ನೀಡಲಾಗಿದೆ.







Comments