;
top of page

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು: ಸೋಮವಾರ ಡಿಕೆಶಿ ಪ್ರಮಾಣವಚನ ಸ್ವೀಕಾರ?

  • May 29
  • 1 min read

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಅಂಗೀಕರಿಸಿದ್ದಾರೆ. ಇಂದೋರ್‌ನಿಂದ ಮರಳಿದ ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೆ ಸಿದ್ದರಾಮಯ್ಯ ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆಯನ್ನು ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು. ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಬೇಕಿದ್ದರಿಂದ, ಇಂದು ಬೆಳಗ್ಗೆ ಈ ಪ್ರಕ್ರಿಯೆ ಪೂರ್ಣಗೊಂಡಿದೆ.

ರಾಜೀನಾಮೆ ಅಂಗೀಕಾರ ಬೆನ್ನಲ್ಲೇ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಲಿದ್ದು, ಡಿ.ಕೆ.ಶಿವಕುಮಾರ್ ನಾಯಕರಾಗಿ ಆಯ್ಕೆಯಾಗುವುದು ಖಚಿತ ಎನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೋಮವಾರ ಸಂಜೆ ಲೋಕಭವನದಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page