ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್? ಸರ್ಕಾರದ ಗಂಭೀರ ಚಿಂತನೆ

ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಕುರಿತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮಗಳ ದುರುಪಯೋಗ ಮತ್ತು ಮಕ್ಕಳ ಮೇಲೆ ಆಗುತ್ತಿರುವ ನಕಾರಾತ್ಮಕ ಪರಿಣಾಮಗಳ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಸ್. ಸುರೇಶ್ ಕುಮಾರ್ ಅವರು ಸದನದಲ್ಲಿ ಕಳವಳ ವ್ಯಕ್ತಪಡಿಸಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಖರ್ಗೆ, "ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಇದು ಅತ್ಯಂತ ಗಂಭೀರ ವಿಷಯವಾಗಿದೆ. ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು," ಎಂದರು. ಆಸ್ಟ್ರೇಲಿಯಾ ಇತ್ತೀಚೆಗಷ್ಟೇ ಈ ನಿಟ್ಟಿನಲ್ಲಿ ಕಠಿಣ ಕಾನೂನು ಜಾರಿಗೆ ತಂದಿದ್ದು, ಅದೇ ಮಾದರಿಯನ್ನು ರಾಜ್ಯದಲ್ಲೂ ಅಳವಡಿಸಿಕೊಳ್ಳುವ ಸಾಧ್ಯತೆಗಳಿವೆ.







Comments