ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ತಡರಾತ್ರಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆ ಸೇರಿರುವ ಅವರ ಆರೋಗ್ಯದ ಮೇಲೆ ವೈದ್ಯರ ತಂಡವು ತೀವ್ರ ನಿಗಾ ವಹಿಸಿದೆ ಎಂದು ಮೂಲಗಳು ತಿಳಿಸಿವೆ.

ಶೀತ ಮತ್ತು ವಾಯುಮಾಲಿನ್ಯದಿಂದಾಗಿ ಉಂಟಾಗುವ ಶ್ವಾಸನಾಳದ ಆಸ್ತಮಾ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜನವರಿಯಲ್ಲಿಯೂ ಸಹ ಇದೇ ರೀತಿಯ ಉಸಿರಾಟದ ತೊಂದರೆಯಿಂದಾಗಿ ಅವರು ಚಿಕಿತ್ಸೆ ಪಡೆದಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.







Comments