;
top of page

ಸೌಜನ್ಯಾ ಹತ್ಯೆ ಪ್ರಕರಣ: ಎಸ್‌ಐಟಿಯಿಂದ ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ, ತನಿಖೆ ತೀವ್ರ

6 days ago
1 min read

ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ, ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಣಾಯಕ ಸಾಕ್ಷ್ಯಗಳನ್ನು ಸಂಗ್ರಹಿಸುವ ಪ್ರಕ್ರಿಯೆಯನ್ನು ಎಸ್‌ಐಟಿ ಆರಂಭಿಸಿದೆ.

ತನಿಖಾಧಿಕಾರಿ ಲೋಕೇಶ್ ಪಿ ಜಗಲಸರ್ ಮತ್ತು ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದ ಮಂಗಳೂರು ಎಸ್‌ಐಟಿ ಕಚೇರಿಯ ತಂಡವು ಬೆಳ್ತಂಗಡಿಗೆ ಆಗಮಿಸಿತು. ಅಕ್ಟೋಬರ್ 23 ರಂದು ಸಂಜೆ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮೃತ ವಿದ್ಯಾರ್ಥಿನಿಯ ತಾಯಿ ಕುಸುಮಾವತಿ ಅವರನ್ನು ಕರೆತಂದ ಅಧಿಕಾರಿಗಳು, ಡಿಎನ್‌ಎ ವಿಶ್ಲೇಷಣೆಗಾಗಿ ಅವರ ರಕ್ತದ ಮಾದರಿಯನ್ನು ಕಾನೂನುಬದ್ಧವಾಗಿ ಸಂಗ್ರಹಿಸಿದರು.

ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಹಾಗೂ ಇಬ್ಬರು ಸರ್ಕಾರಿ ಸಾಕ್ಷಿಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ಜರುಗಿತು. ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ಡಾ. ಆಶಾ ಲತಾ ಅವರ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ರಕ್ತದ ಮಾದರಿ ಸಂಗ್ರಹಿಸಲಾಯಿತು.

ಸುಪ್ರೀಂ ಕೋರ್ಟ್ ಆದೇಶದಂತೆ ನಡೆಯುತ್ತಿರುವ ಈ ಹೊಸ ತನಿಖೆಯು ಪ್ರಕರಣದ ನೈಜ್ಯ ಸತ್ಯವನ್ನು ಹೊರಹಾಕುವಲ್ಲಿ ಮತ್ತು ನ್ಯಾಯ ದೊರಕಿಸಿಕೊಡುವಲ್ಲಿ ನಿರ್ಣಾಯಕವಾಗಲಿದೆ ಎಂದು ಸಾರ್ವಜನಿಕರು ನಿರೀಕ್ಷಿಸಿದ್ದಾರೆ. ಎಸ್‌ಐಟಿ ತಂಡವು ಮುಂದಿನ ದಿನಗಳಲ್ಲಿ ಇನ್ನಷ್ಟು ತನಿಖಾ ಹೆಜ್ಜೆಗಳನ್ನು ಇಡುವ ಸಾಧ್ಯತೆಯಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page