ಸೌಜನ್ಯ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತರಾಟೆ, ಆದೇಶ ಕಾಯ್ದಿರಿಸಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ.
ವಿಚಾರಣೆ ವೇಳೆ ಸಿಬಿಐ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠವು, ಸರಿಯಾದ ತನಿಖೆ ನಡೆಸದೆ ಸಿಬ್ಬಂದಿ ಮತ್ತು ಹಣಕಾಸಿನ ಅಭಾವದ ನೆಪ ಹೇಳುತ್ತಿರುವುದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
ಪ್ರಕರಣವನ್ನು ಎಸ್‌ಐಟಿಗೆ ವಹಿಸಲು ರಾಜ್ಯ ಸರ್ಕಾರ ಸಮ್ಮತಿಸಿದ್ದು, ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಗೆ ಅರ್ಜಿದಾರರು ಕೋರಿದ್ದಾರೆ. ತನಿಖಾ ಏಜೆನ್ಸಿ ಕುರಿತು ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಅಂತಿಮ ಮಾರ್ಗಸೂಚಿ ಪ್ರಕಟಿಸಲಿದೆ.







Comments