SSLC ಪರೀಕ್ಷೆ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
- sathyapathanewsplu
- 3 days ago
- 1 min read

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಶಿಕ್ಷಣ ಇಲಾಖೆಯು, ಮುಖ್ಯ ಪರೀಕ್ಷೆಗಾಗಿ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರೀಕ್ಷಾ ಅಕ್ರಮಗಳಿಗೆ ತಡೆ ಹಾಕಲು ಈ ಬಾರಿ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಹೊಸ ಗೈಡ್‌ಲೈನ್ಸ್ ಪ್ರಕಾರ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರಿಗೂ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಇನ್ಮುಂದೆ 2ನೇ ಹಾಗೂ 3ನೇ ಹಂತದ ಪರೀಕ್ಷೆಗಳು ನೇರವಾಗಿ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಜಿಲ್ಲೆಯ ಡಿಡಿಪಿಐ (DDPI) ಹಾಗೂ ಬಿಇಒ (BEO) ಅವರಿಗೆ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆಯ ಸುರಕ್ಷತೆ ಮತ್ತು ಪರೀಕ್ಷೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.





Comments