;
top of page

ವಿಶೇಷ ಎಸ್‌ಐಆರ್ ಅಕ್ರಮ ಖಂಡಿಸಿ ವಿಪಕ್ಷಗಳಿಂದ 'ಸುಪ್ರೀಂ ಕೋರ್ಟ್ ಚಲೋ': ದೆಹಲಿಯಲ್ಲಿ ಮೆಟ್ರೋ ಬಂದ್, ಸಂಚಾರ ಅಸ್ತವ್ಯಸ್ತ

Oct 12
1 min read

ನವದೆಹಲಿ: ಚುನಾವಣಾ ಆಯೋಗದ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟವು ಇಂದು ದೆಹಲಿಯಲ್ಲಿ ಬೃಹತ್ 'ಸುಪ್ರೀಂ ಕೋರ್ಟ್ ಚಲೋ' ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಭದ್ರತಾ ಮುನ್ನೆಚ್ಚರಿಕೆಯಾಗಿ ಕೇಂದ್ರ ದೆಹಲಿಯ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್, ಪಟೇಲ್ ಚೌಕ್, ಜನಪಥ್, ಮಂಡಿ ಹೌಸ್ ಮತ್ತು ಬಾರಾಖಂಬಾ ರಸ್ತೆಯ ಪ್ರಮುಖ 6 ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸೋಮವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆದರೆ, ಇಂಟರ್‌ಚೇಂಜ್ (ಮಾರ್ಗ ಬದಲಾವಣೆ) ಸೌಲಭ್ಯ ಲಭ್ಯವಿರಲಿದೆ.

ಬಿಗಿ ಪೊಲೀಸ್ ಭದ್ರತೆ ಹಾಗೂ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ನೀರು ನಿಂತಿದ್ದು, ದೆಹಲಿಯ ಪ್ರಮುಖ ರಸ್ತೆಗಳಲ್ಲಿ ತೀವ್ರ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page