ದ.ಕನ್ನಡ: ಎಸ್‌ಎಸ್‌ಐ ಕೊಲೆ ಯತ್ನ ಪ್ರಕರಣ – ಅಪರಾಧಿಗೆ 7 ವರ್ಷಗಳ ಕಠಿಣ ಶಿಕ್ಷೆ
- Apr 28
- 1 min read

ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿದ್ದ ಐತ್ತಪ್ಪ ಅವರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಅಪರಾಧಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.
ಈ ಪ್ರಕರಣವನ್ನು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ-1 (ತ್ವರಿತಗತಿ ನ್ಯಾಯಾಲಯ)ವು, ಸುರತ್ಕಲ್ ನಿವಾಸಿ ಮಹಮ್ಮದ್ ನಿಯಾಜ್ (29) ಅಪರಾಧಿ ಎಂದು ತೀರ್ಮಾನಿಸಿ, 7 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಸೋಮವಾರ (ಏ.27) ತೀರ್ಪು ನೀಡಿದೆ.

ನ್ಯಾಯಾಧೀಶ ಮೋಹನ ಜೆ.ಎಸ್. ಅವರು ಪ್ರಕರಣದ ಸಾಕ್ಷ್ಯಾಧಾರಗಳು, ದಾಖಲೆಗಳು ಮತ್ತು ವಾದಗಳನ್ನು ಪರಿಶೀಲಿಸಿದ ಬಳಿಕ, ದ್ವಿತೀಯ ಆರೋಪಿ ಮಹಮ್ಮದ್ ನಿಯಾಜ್ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ಘೋಷಿಸಿದರು.
ಇನ್ನು ವಿಧಿಸಲಾದ ₹50,000 ದಂಡದ ಮೊತ್ತದಲ್ಲಿ ₹45,000 ಹಣವನ್ನು ಗಾಯಗೊಂಡ ಸಹಾಯಕ ಉಪನಿರೀಕ್ಷಕರಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಈ ಪ್ರಕರಣದಲ್ಲಿ ಮೊದಲ ಆರೋಪಿ ಶಮೀರ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಿಚಾರಣೆ ಇನ್ನೂ ಬಾಕಿ ಉಳಿದಿದೆ.







Comments