ಕೈ-ಕಾಲು ಕತ್ತರಿಸುವ ಶಿಕ್ಷೆ ಇದ್ದರೆ ಮಾತ್ರ ಕಾನೂನು ಪಾಲನೆ ಸಾಧ್ಯ: ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್
- Jun 2
- 1 min read

ದೇಶದಲ್ಲಿ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಕಾನೂನು ತನ್ನ ಪ್ರಭಾವ ಕಳೆದುಕೊಂಡಿದೆ. ಮಧ್ಯಪ್ರಾಚ್ಯ ದೇಶಗಳ ಮಾದರಿಯಲ್ಲಿ ಕೈ-ಕಾಲು ಕತ್ತರಿಸುವಂತಹ ಕಠಿಣ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.
ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿರುವ ತೆಲಂಗಾಣದ ಯುವಕನ ಜಾಮೀನು ಅರ್ಜಿ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಗಳು ಈ ಕಳಕಳಿಯ ಮಾತುಗಳನ್ನಾಡಿದ್ದಾರೆ. ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯ ಭಯವೇ ಇಲ್ಲದಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ನಮ್ಮ ಪ್ರಜಾಪ್ರಭುತ್ವದಲ್ಲಿ ಅಪರಾಧ ಎಸಗುವುದು ಸುಲಭ ಎನ್ನುವ ವಾತಾವರಣ ನಿರ್ಮಾಣವಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತಾದರೆ ಮಾತ್ರ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.







Comments