;
top of page

ಉಪನ್ಯಾಸಕಿಯ ಅವಮಾನಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್ ನೋಟ್ ಪತ್ತೆ

  • 4 days ago
  • 1 min read

ಸಹಪಾಠಿಗಳ ಮುಂದೆ ಉಪನ್ಯಾಸಕಿಯೊಬ್ಬರು ಅವಮಾನ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಗೌತಮಿ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಏಪ್ರಿಲ್ 4ರಂದು ಈ ಘಟನೆ ನಡೆದಿದ್ದು, ಸುಭಾಷನಗರದ ತನ್ನ ಮನೆಯಲ್ಲಿ ಗೌತಮಿ ಪ್ರಾಣ ಕಳೆದುಕೊಂಡಿದ್ದಾಳೆ. ಆರಂಭದಲ್ಲಿ ಮಾನಸಿಕ ಖಿನ್ನತೆಯಿಂದ ಮಗಳು ಈ ಹಂತಕ್ಕೆ ಹೋಗಿರಬಹುದು ಎಂದು ಪೋಷಕರು ಭಾವಿಸಿದ್ದರು. ಆದರೆ, ಇತ್ತೀಚೆಗೆ ಆಕೆಯ ಕೊಠಡಿಯಲ್ಲಿ ಸಿಕ್ಕ ಡೆತ್ ನೋಟ್ ಸಾವಿನ ಹಿಂದಿನ ಅಸಲಿ ಕಾರಣವನ್ನು ಬಯಲು ಮಾಡಿದೆ.

ಗೌತಮಿಯ ತಂದೆ ಸೋಮಶೇಖರಯ್ಯ ಕಚೇರಿಯಿಂದ ಮನೆಗೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಡೆತ್ ನೋಟ್‌ನಲ್ಲಿ ಉಪನ್ಯಾಸಕಿಯ ಕಿರುಕುಳದ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ, ಪೋಷಕರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯ ಅಕಾಲಿಕ ಸಾವು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page