ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ
- Jun 4
- 1 min read

ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ನಡೆಸಿದ ತಮ್ಮ ಮೊದಲ ಸುದ್ದಿಗೋಷ್ಠಿಯಲ್ಲಿ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪಾಸ್ ಸೌಲಭ್ಯವನ್ನು, ಇನ್ನು ಮುಂದೆ ಶಾಲಾ ಬಾಲಕರು ಹಾಗೂ ಕಾಲೇಜು ಯುವಕರಿಗೂ ವಿಸ್ತರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಉಚಿತ ಪಾಸ್ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಇದಕ್ಕಾಗಿ ಎಷ್ಟು ಸಾವಿರ ಕೋಟಿ ರೂಪಾಯಿ ವೆಚ್ಚವಾದರೂ ಸರ್ಕಾರ ಭರಿಸಲು ಸಿದ್ಧವಿದೆ. ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್ ತಲುಪಿಸಬೇಕು ಎನ್ನುವುದೇ ಸರ್ಕಾರದ ಮುಖ್ಯ ತೀರ್ಮಾನವಾಗಿದೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.







Comments