ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು
- sathyapathanewsplu
- 4 days ago
- 1 min read

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಕೊಲ್ಲಮೊಗ್ರ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಈ ಘಟನೆಯಿಂದ ಸುಬ್ರಹ್ಮಣ್ಯ ಮತ್ತು ಕೊಲ್ಲಮೊಗ್ರ ಭಾಗದಲ್ಲಿ ಶೋಕದ ಛಾಯೆ ಆವರಿಸಿದೆ.
ಮೃತಪಟ್ಟವರನ್ನು ಸುಬ್ರಹ್ಮಣ್ಯದಲ್ಲಿ ಉದ್ಯಮ ನಡೆಸುತ್ತಿದ್ದ ಹರಿಪ್ರಸಾದ್ ಹಾಗೂ ಸುಜೀತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರು ರಜಾ ದಿನವಾದ ಇಂದು ಮಧ್ಯಾಹ್ನದ ವೇಳೆಗೆ ನದಿಯಲ್ಲಿ ಸ್ನಾನ ಮಾಡಲು ಅಥವಾ ಈಜಲು ತೆರಳಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ.
ನದಿಯಲ್ಲಿ ಮುಳುಗಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವಕರ ಅಕಾಲಿಕ ಮರಣವು ಅವರ ಕುಟುಂಬಸ್ಥರು ಹಾಗೂ ಸ್ನೇಹಿತರ ಆಕ್ರಂದನಕ್ಕೆ ಕಾರಣವಾಗಿದೆ.





Comments