ಸಕ್ಕರೆ ರಫ್ತಿನ ಮೇಲೆ ಕೇಂದ್ರದಿಂದ ದಿಢೀರ್ ನಿಷೇಧ
- May 14
- 1 min read

ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮತ್ತು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ತಡೆಯಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 30ರವರೆಗೆ ಸಕ್ಕರೆ ರಫ್ತಿನ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣ ನಿಷೇಧ ಹೇರಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆದೇಶ ಹೊರಡಿಸಿದೆ.
ಈ ಹೊಸ ನಿಯಮದಡಿ ಕಚ್ಚಾ, ಬಿಳಿ ಹಾಗೂ ಸಂಸ್ಕರಿಸಿದ ಸಕ್ಕರೆ ರಫ್ತನ್ನು 'ನಿರ್ಬಂಧಿತ' ವರ್ಗದಿಂದ 'ನಿಷೇಧಿತ' ವರ್ಗಕ್ಕೆ ಸೇರಿಸಲಾಗಿದೆ. ಇದರಿಂದಾಗಿ ವಿದೇಶಗಳಿಗೆ ಸಕ್ಕರೆ ರವಾನಿಸುವುದಕ್ಕೆ ಸಂಪೂರ್ಣ ತಡೆ ಬಿದ್ದಂತಾಗಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಸಕ್ಕರೆ ಲಭ್ಯತೆಯನ್ನು ಕಾಯ್ದುಕೊಳ್ಳುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಆದರೆ, ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಕ್ಕೆ ನಿಗದಿತ ಕೋಟಾದಡಿ ಮಾಡುವ ರಫ್ತಿಗೆ ಈ ನಿಯಮ ಅನ್ವಯಿಸುವುದಿಲ್ಲ. ಈಗಾಗಲೇ ಸಾಗಣೆಯಲ್ಲಿರುವ ಸರಕುಗಳು ಮತ್ತು ಸರ್ಕಾರದ ವಿಶೇಷ ಅನುಮೋದನೆ ಪಡೆದ ಆರ್ಡರ್‌ಗಳಿಗೆ ಮಾತ್ರ ಈ ನಿಷೇಧದಿಂದ ವಿನಾಯಿತಿ ನೀಡಲಾಗಿದೆ ಎಂದು ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಸ್ಪಷ್ಟಪಡಿಸಿದೆ.







Comments