;
top of page

ಸುಳ್ಯದ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ

Sep 5
1 min read

ಸುಳ್ಯ: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಸುಳ್ಯ ತಾಲೂಕಿನ ಮೂವರು ಸಾಧಕ ಶಿಕ್ಷಕರು ಈ ಗೌರವಕ್ಕೆ ಭಾಜನರಾಗಿದ್ದಾರೆ.

* ಕಿರಿಯ ಪ್ರಾಥಮಿಕ ವಿಭಾಗ: ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಯಶೋಧರ ಕೆ.

* ಹಿರಿಯ ಪ್ರಾಥಮಿಕ ವಿಭಾಗ: ಏಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಭುವನೇಶ್ವರಿ ಕೆ.

* ಪ್ರೌಢಶಾಲಾ ವಿಭಾಗ: ಅರಂತೋಡು ಎನ್‌ಎಂಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಕಿಶೋರ್ ಕುಮಾರ್.

ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಸೆಪ್ಟೆಂಬರ್ 5ರಂದು ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಇವರನ್ನು ಗೌರವಿಸಲಾಗುವುದು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page