;
top of page

ಸುಳ್ಯದಲ್ಲಿ ದುರಂತ: ಕಾಲೇಜು ಉಪನ್ಯಾಸಕ ಹಠಾತ್ ಕುಸಿದು ಬಿದ್ದು ಸಾವು

  • Mar 12
  • 1 min read

ಸುಳ್ಯ ಕೊಡಿಯಾಲ್ ಬೈಲ್‌ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಂಜು (42) ಅವರು ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮಂಜು ಅವರು ಕಳೆದ ಎರಡು ವರ್ಷಗಳಿಂದ ಈ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆರಂಭದಲ್ಲಿ ಹೈಸ್ಕೂಲ್‌ನಲ್ಲಿ ಪಾಠ ನಿರ್ವಹಿಸುತ್ತಿದ್ದ ಅವರು ನಂತರ ಪದವಿ ಕಾಲೇಜಿಗೆ ಭಡ್ತಿ ಪಡೆದು ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.

Ad
Ad

ಗುರುವಾರ ಮಧ್ಯಾಹ್ನ ಕಾಲೇಜಿನ ಸಿಬ್ಬಂದಿಯೊಂದಿಗೆ ಮಾತನಾಡಿದ ನಂತರ ಮಂಜು ಅವರು “ಸ್ವಲ್ಪ ಆರೋಗ್ಯ ಸರಿಯಿಲ್ಲ” ಎಂದು ಹೇಳಿ ವಿಶ್ರಾಂತಿಗಾಗಿ ಮನೆಗೆ ತೆರಳಿದ್ದರು. ಬಳಿಕ ಔಷಧಿ ಪಡೆಯಲು ಮೆಡಿಕಲ್ ಅಂಗಡಿಗೆ ಹೋಗಿದ್ದ ವೇಳೆ ಶ್ರೀರಾಂ ಪೇಟೆ ಸಮೀಪ ಹಠಾತ್ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ತಕ್ಷಣವೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದರೂ, ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ನೆಚ್ಚಿನ ಉಪನ್ಯಾಸಕರ ಅಕಾಲಿಕ ನಿಧನದಿಂದ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಯಲ್ಲಿ ಆಘಾತ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page