;
top of page

ಸುಳ್ಯ: ವಿವಾಹಿತೆ ಅನುಮಾನಾಸ್ಪದ ಸಾವು; ಅತ್ತೆ, ಮಾವನ ವಿರುದ್ಧ ಕೊಲೆ ಆರೋಪ

Jul 21
1 min read

ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಪುತ್ತೂರು ಕೆದಂಬಾಡಿಯ ಫಾತಿಮತ್ ನಿಶಾನ ಎಂಬುವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಜುಲೈ 18ರ ರಾತ್ರಿ ತಾಯಿಗೆ ಕರೆ ಮಾಡಿದ್ದ ನಿಶಾನಾ, ತನಗೆ ಗಂಡನ ಮನೆಯವರು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದರು.

ಇದೇ ವೇಳೆ ಫೋನ್ ಕಸಿದುಕೊಂಡ ಮಾವ ಅಲವಿ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಪೋಷಕರು ಸ್ಥಳಕ್ಕೆ ತೆರಳುವಷ್ಟರಲ್ಲಿ ನಿಶಾನಾ ಮೃತಪಟ್ಟಿದ್ದರು.

ಕೌಟುಂಬಿಕ ಕಿರುಕುಳ ಹಾಗೂ ಹತ್ಯೆ ಆರೋಪದಡಿ ಮೃತರ ಮಾವ ಅಲವಿ, ಅತ್ತೆ ಆಯಿಷ ಮತ್ತು ನಾದಿನಿ ಫಸೀಲಾ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 100/2026) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page