;
top of page

ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾಗೆ ಕಾರು ಢಿಕ್ಕಿ; ಭಾಗೀರಥಿ ಮುರುಳ್ಯ ಅಪಾಯದಿಂದ ಪಾರು

Oct 6
1 min read

ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ಕರಿಕ್ಕಳ–ನಿಂತಿಕಲ್ ಮಾರ್ಗದ ಮುಚ್ಚಿಲ ಎಂಬಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ ಮುಂಭಾಗದಲ್ಲಿ ಸಾಗುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದೆ. ಇದರಿಂದ ಹಿಂಬದಿಯಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಮುಂಭಾಗದ ಕಾರಿಗೆ ಢಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಇನ್ನೋವಾ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಳಿಕ ಶಾಸಕಿ ಬೇರೊಂದು ವಾಹನದ ಮೂಲಕ ತಮ್ಮ ಮನೆಗೆ ತೆರಳಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯ ಸಂಭವಿಸಿಲ್ಲ.



Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page