;
top of page

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ, ಲೈಂಗಿಕ ದೌರ್ಜನ್ಯ ಎಸಗಿದ ಯುವಕನ ಬಂಧನ

Jul 24
1 min read

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ ತಿಂಗಳಲ್ಲಿ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಮೇ 7ರಂದು ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಬಾಲಕಿ ಮನೆಗೆ ಮರಳದಿದ್ದಾಗ, ಕುಟುಂಬದವರು ಮೇ 11ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಬಾಲಕಿ ಪತ್ತೆಯಾದ ನಂತರ ಆಕೆಯಿಂದ ಮಾಹಿತಿ ಪಡೆದ ಪೊಲೀಸರು, ಪ್ರಕರಣಕ್ಕೆ ಬಿಎನ್‌ಎಸ್ ಹಾಗೂ ಪೋಕ್ಸೋ (POCSO) ಕಾಯ್ದೆಯಡಿ ಹೆಚ್ಚುವರಿ ಲೈಂಗಿಕ ದೌರ್ಜನ್ಯದ ಕಲಂಗಳನ್ನು ಸೇರ್ಪಡೆಗೊಳಿಸಿದ್ದಾರೆ. ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ತನಿಖೆ ಚುರುಕುಗೊಳಿಸಲಾಗಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಧನುಷ್ ಎಂಬ ಯುವಕನನ್ನು ಜುಲೈ 22ರಂದು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page