ಮತಾಂತರವಾದರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಅನ್ಯ ಧರ್ಮಗಳಿಗೆ ಮತಾಂತರವಾಗುವ ವ್ಯಕ್ತಿಗಳು ತಮ್ಮ ಪರಿಶಿಷ್ಟ ಜಾತಿ (SC) ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಆಂಧ್ರಪ್ರದೇಶದ ಪಾದ್ರಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರಿದ್ದ ಪೀಠವು, 1950ರ ಸಂವಿಧಾನದ ಆದೇಶದ ಪ್ರಕಾರ ಅನ್ಯ ಧರ್ಮದ ಅನುಯಾಯಿಗಳನ್ನು ಎಸ್‌ಸಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಮೇಲಿನ ಹಲ್ಲೆಗೆ ಸಂಬಂಧಿಸಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಅವರು ಮತಾಂತರಗೊಂಡಿರುವುದರಿಂದ ಈ ಕಾಯ್ದೆಯ ರಕ್ಷಣೆ ಪಡೆಯಲು ಅರ್ಹರಲ್ಲ ಎಂಬ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಮತಾಂತರವು ಎಸ್‌ಸಿ ಸ್ಥಾನಮಾನದ ಸಾಂವಿಧಾನಿಕ ಹಕ್ಕುಗಳನ್ನು ರದ್ದುಗೊಳಿಸುತ್ತದೆ ಎಂಬ ಈ ತೀರ್ಪು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.







Comments