;
top of page

ಗಡೀಪಾರು ಆದೇಶಕ್ಕೆ ಸುಪ್ರೀಂ ಅಸ್ತು: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ತೀವ್ರ ಹಿನ್ನಡೆ

  • 3 days ago
  • 1 min read

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೊರಡಿಸಲಾಗಿದ್ದ ಈ ಆದೇಶವನ್ನು ಪ್ರಶ್ನಿಸಿ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸುವ ಮೂಲಕ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ.

ಈ ಹಿಂದೆ ಹೈಕೋರ್ಟ್‌ನ ಏಕಸದಸ್ಯ ಪೀಠ ಮತ್ತು ಮುಖ್ಯ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠಗಳು ಸಹ ಈ ಗಡೀಪಾರು ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ, ಅರ್ಜಿಯನ್ನು ತಿರಸ್ಕರಿಸಿದ್ದವು. ಹೈಕೋರ್ಟ್‌ನ ಈ ತೀರ್ಪನ್ನೇ ಇದೀಗ ಸುಪ್ರೀಂ ಕೋರ್ಟ್ ಸಮರ್ಥಿಸಿದೆ. ಸಮಾಜದಲ್ಲಿ ಅಶಾಂತಿ ಮತ್ತು ಕಾನೂನು ಉಲ್ಲಂಘನೆಯ ಆರೋಪದಡಿ ಪುತ್ತೂರು ಎಸಿ ಅವರು ಕಳೆದ ಮಾರ್ಚ್‌ನಲ್ಲಿ ಮೂರನೇ ಬಾರಿ ಈ ಆದೇಶ ಹೊರಡಿಸಿದ್ದರು.

ತಿಮರೋಡಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಈ ಕಠಿಣ ಕ್ರಮ ಕೈಗೊಂಡಿದ್ದರು. 2025ರ ಸೆಪ್ಟೆಂಬರ್‌ನಲ್ಲಿ ಮೊದಲ ಬಾರಿಗೆ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಸ್ಥಳಾಂತರಿಸಲು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಆದೇಶಿಸಿದ್ದರು. ಸದ್ಯ ಸುಪ್ರೀಂ ಕೋರ್ಟ್‌ನ ಈ ನಿರ್ಧಾರದಿಂದಾಗಿ ತಿಮರೋಡಿ ಅವರು ಗಡೀಪಾರು ಶಿಕ್ಷೆಯನ್ನು ಎದುರಿಸುವುದು ಅನಿವಾರ್ಯವಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page