;
top of page

ಸುಳ್ಳು ವಿಡಿಯೋ ಪ್ರಕರಣ : ವ್ಯಕ್ತಿಯ ಆತ್ಮಹತ್ಯೆಗೆ ಕಾರಣವಾದ ಶಿಂಜಿತಾ ಮುಸ್ತಫಾ ಬಂಧನ

  • Jan 22
  • 1 min read

ತಿರುವನಂತಪುರಂ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೊಂಡು, ಅವರ ಸಾವಿಗೆ ಕಾರಣವಾದ ಆರೋಪದಡಿ ಶಿಂಜಿತಾ ಮುಸ್ತಫಾ ಎಂಬಾಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ದೀಪಕ್ ಎಂಬುವವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಶಿಂಜಿತಾ ವಿಡಿಯೋ ಮಾಡಿ ವೈರಲ್ ಮಾಡಿದ್ದಳು. ಇದರಿಂದ ಮನನೊಂದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆಯ ವೇಳೆ ಬಸ್ ಚಾಲಕ ಮತ್ತು ಕಂಡಕ್ಟರ್ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸಾಕ್ಷ್ಯ ನೀಡಿದ್ದಾರೆ. ದೀಪಕ್ ಪೋಷಕರ ದೂರಿನನ್ವಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿದ ಪೊಲೀಸರು, ನಾಪತ್ತೆಯಾಗಿದ್ದ ಶಿಂಜಿತಾಳನ್ನು ಕೋಯಿಕ್ಕೋಡ್‌ನಲ್ಲಿ ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯ ಆಕೆಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page